ಹೊಸ ದಿಗಂತ ಡಿಜಿಟಲ್ ಡೆಸ್ಕ್;
ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ್ದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ 2019ರಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಸಂಸದ ಎಂಜಿನಿಯರ್ ರಶೀದ್ ಗೆ ಜುಲೈ 24 ರಿಂದ ಆಗಸ್ಟ್ 4ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಭಾಗಿಯಾಗಲು ದೆಹಲಿ ನ್ಯಾಯಾಲಯ ಮಂಗಳವಾರ ಪೆರೋಲ್ ನೀಡಿದೆ.
ಹೆಚ್ಚುವರಿ ಸೆಷನ್ ಜಡ್ಜ್ ಚಂದೇರ್ ಜಿತ್ಸಿಂಗ್ ಅವರು ರಶೀದ್ ಅವರಿಗೆ ಪೆರೋಲ್ ನೀಡಿದ್ದಾರೆ. ಸಂಸತ್ ಅಧಿವೇಶನದಲ್ಲಿ ತನ್ನ ಕರ್ತವ್ಯ ನಿರ್ವಹಿಸಲು ಮಧ್ಯಂತರ ಜಾಮೀನು ನೀಡಬೇಕು ಅಥವಾ ಕಸ್ಟಡಿ ಪೆರೋಲ್ ನೀಡುವಂತೆ ಬಾರಮುಲ್ಲಾ ಸಂಸದರಾಗಿರುವ ರಶೀದ್ ನ್ಯಾಯಾಲಯವನ್ನು ಕೋರಿದ್ದರು. ಪೆರೋಲ್ ವೇಳೆ ರಶೀದ್ ಜೊತೆಗೆ ಶಸ್ತ್ರ ಸಜ್ಜಿತ ಪೊಲೀಸ್ ಸಿಬ್ಬಂದಿ ಇರಲಿದ್ದಾರೆ.
ರಶೀದ್ 2024ರ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಲ್ಲಿ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದರು.