Saturday, December 6, 2025

ಕಾರವಾರ ಜೈಲಿನಲ್ಲಿ ಕೈದಿಗಳಿಂದಲೇ ಜೈಲರ್ ಮೇಲೆ ಹಲ್ಲೆ

ಹೊಸ ದಿಗಂತ ವರದಿ, ಕಾರವಾರ:

ಮಾದಕ ವಸ್ತುಗಳ ಪೂರೈಕೆಯನ್ನು ನಿಗ್ರಹಿಸಿದ ಹಿನ್ನಲೆಯಲ್ಲಿ ಕಾರವಾರ ಜಿಲ್ಲಾ ಕಾರಾಗ್ರಹದಲ್ಲಿ ಇಬ್ಬರು ಇಬ್ನರು ರೌಡಿಗಳಿಂದ ಜೈಲರ್ ಸೇರಿ ಮೂವರು ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಶನಿವಾರ ನಡೆದಿದೆ.

ಈ ಘಟನೆಯಲ್ಲಿ ರೌಡಿಗಳು ಜೈಲು ಸಿಬ್ಬಂದಿಗಳ ಸಮವಸ್ತ್ರವನ್ನೂ ಹರಿದು ಹಾಕಿದ್ದು ಹಲ್ಲೆಯಿಂದ ಅವರು ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು ಮೂಲದ ರೌಡಿಗಳಾದ ಮಹಮ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ್ ನಿಹಾಲ್ ಹಲ್ಲೆ ಮಾಡಿದ ವಿಚಾರಣಾಧೀನ ಕೈದಿಯಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಜೈಲರ್ ಕಲ್ಲಪ್ಪ ಗಸ್ತಿ ಮತ್ತು ಸಿಬ್ಬಂದಿಗಳನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ದರೋಡೆ ಸಹಿತ ವಿವಿಧ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಅಬ್ದುಲ್ ಫಯಾನ್ ಮತ್ತು ಕೌಶಿಕ್ ಅವರನ್ನು ಕೈದಿಗಳ ಸಂಖ್ಯೆ ಹೆಚ್ಚಾದ ಕಾರಣಕ್ಕಾಗಿ ಕಾರವಾರ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಕೆಲ ದಿನಗಳಿಂದ ಜೈಲಿನಲ್ಲಿ ಮಾದಕ ಪದಾರ್ಥಗಳ ನಿಯಂತ್ರಣಕ್ಕೆ ಜೈಲ‌ರ್ ಕಲ್ಲಪ್ಪ ಸಂಪೂರ್ಣ ನಿರ್ಬಂಧ ಹೇರಿ ತಪಾಸಣೆ ಬಿಗಿಗೊಳಿಸಿದ್ದೇ ಇವರು ವ್ಯಗ್ರಗೊಳ್ಳಲು ಕಾರಣ ಎಂದು ತಿಳಿದು ಬಂದಿದೆ. ಶನಿವಾರ ಬೆಳಿಗ್ಗೆ ಆರೋಪಿಗಳು ಜೈಲ‌ರ್ ಜೊತೆ ವಾಗ್ವಾದ ನಡೆಸಿದ್ದಾರೆ. ಅಲ್ಲದೇ ಜೈಲರ್ ಕಲ್ಲಪ್ಪ ಹಾಗೂ ಕರ್ತವ್ಯನಿರತ ಇತರ ಮೂವರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

error: Content is protected !!