ಜೈನಮುನಿ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ : ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸದನದಲ್ಲಿ ಈ ಬಗ್ಗೆ ಮಾತನಾಡಿದ್ದು, ಜೈನಮುನಿಗಳ ಹತ್ಯೆ ಪ್ರಕರಣ ಅತೀ ಸೂಕ್ಷ್ಮವಾದ್ದು, ಹೀಗಾಗಿ ಸಿಐಡಿಗೆ ಹಸ್ತಾಂತರ ಮಾಡಲಾಗುವುದು ಎಂದಿದ್ದಾರೆ.

ಕೆಲ ದಿನಗಳ ಹಿಂದೆ ಜೈನಮುನಿಗಳು ಮಠದಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಗಳ ವಿಚಾರಣೆ ನಡೆಸಿದ್ದರು. ಈ ವೇಳೆ ಜೈನಮುನಿಗಳ ಹತ್ಯೆ ಮಾಡಿ ಬೋರ್‌ವೆಲ್‌ಗೆ ಎಸೆಯಲಾಗಿದೆ ಎಂದು ಆರೋಪಿಗಳು ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!