ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೈನಮುನಿ, ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ಪ್ರಭಾವಕ್ಕೆ ಮಣಿಯಲ್ಲ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಜೈನಮುನಿ, ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ ನಾನು ಯಾವುದೇ ಒತ್ತಡಕ್ಕೆ ಮಣಿಯಲ್ಲ.ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ತನಿಖೆಗೆ ನೀಡಲ್ಲ. ತಿ.ನರಸೀಪುರದಲ್ಲಿ ನಡೆದ ಘಟನೆ ಆಕಸ್ಮಿಕ ಎಂದು ಪ್ರತಿಕ್ರಿಯೆ ನೀಡಿದ್ದಾರೆ.