ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೈಸಲ್ಮೇರ್ ಬಸ್ ಬೆಂಕಿ ಅವಘಡದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ರಾಜಸ್ತಾನದ ಜೈಸಲ್ಮೇರ್‌ನಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಪ್ರತಿಯೊಬ್ಬರ ಹತ್ತಿರದ ಸಂಬಂಧಿಕರಿಗೆ 2 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ನೀಡಲಾಗುವುದು ಎಂದು ತಿಳಿಸಲಾಗಿದೆ.