ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಪಾಕ್‌ನಲ್ಲಿದ್ದಾನೆ: ತಾಲಿಬಾನ್‌ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ತನ್ನ ದೇಶದಲ್ಲಿಲ್ಲ ಎಂದು ಪಾಕ್‌-ಆಫ್ಘನ್‌ ಎರಡೂ ರಾಷ್ಟ್ರಗಳು ವಾದ ಮಾಡುತ್ತಿವೆ. ಇದೀಗ ಮಸೂದ್‌ ಅಜರ್ ಪಾಕಿಸ್ತಾನದಲ್ಲಿ ಇದ್ದಾನೆ ಎಂದು ಅಫ್ಘಾನಿಸ್ತಾನದ ತಾಲಿಬಾನ್ ಹೇಳಿದೆ.‌ ಆದರೆ, ಮಸೂದ್ ಅಜರ್ ಇನ್ನೂ ಅಫ್ಘಾನಿಸ್ತಾನದಲ್ಲಿದ್ದು, ಆತನನ್ನು ಬಂಧಿಸುವಂತೆ ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ತಾಲಿಬಾನ್‌ಗೆ ಇತ್ತೀಚೆಗೆ ಪತ್ರ ಬರೆದಿದೆ. ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಮಸೂದ್ ಅಜರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಶ್ಚಿಮಾತ್ಯ ದೇಶಗಳಿಂದ ಹೆಚ್ಚುತ್ತಿರುವ ಒತ್ತಡದಿಂದಾಗಿ ಮಸೂದ್ ಅಜರ್ ತಮ್ಮ ದೇಶದಲ್ಲಿ ಇಲ್ಲ ಎಂದು ಪಾಕಿಸ್ತಾನ ಹೇಳುತ್ತಿದೆ.

ಮಸೂದ್ ನಂಗ್ರಾಹರ್ ಪ್ರಾಂತ್ಯ ಅಥವಾ ಅಫ್ಘಾನಿಸ್ತಾನದ ಕುನಾರ್ ಪ್ರಾಂತ್ಯದಲ್ಲಿರಬಹುದು ಎಂದು ಪಾಕಿಸ್ತಾನ ಹೇಳಿಕೆಗೆ ತಾಲಿಬಾನ್ ಖಾರವಾಗಿ ಪ್ರತಿಕ್ರಿಯಿಸಿದೆ. ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಮಸೂದ್ ಅಫ್ಘಾನಿಸ್ತಾನದಲ್ಲಿಲ್ಲ, ಪಾಕ್ ಮಾಡುತ್ತಿರುವ ಆರೋಪದಲ್ಲಿ ಸತ್ಯವಿಲ್ಲ ಆತ ವಾಸ್ತವವಾಗಿ ಪಾಕಿಸ್ತಾನದಲ್ಲಿದ್ದಾರೆ. ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆ ಪಾಕಿಸ್ತಾನಕ್ಕೆ ಸೇರಿದ್ದು ಎಂದಿದ್ದಾರೆ.

ಪಾಕಿಸ್ತಾನದ ಹೇಳಿಕೆಗೆ ಅಫ್ಘಾನಿಸ್ತಾನ ವಿದೇಶಾಂಗ ಸಚಿವಾಲಯವೂ ಪ್ರತಿಕ್ರಿಯೆ ನೀಡಿದೆ. ಇಂತಹ ಆರೋಪಗಳು ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವಿನ ಉತ್ತಮ ಸಂಬಂಧವನ್ನು ಹಾಳುಮಾಡುತ್ತವೆ ಎಂದಿದೆ. ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ತೀವ್ರವಾಗಿ ಉತ್ತರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!