ಜಮ್ಮು ಕಾಶ್ಮೀರದಲ್ಲಿ ಜೈಶ್ ಸಂಘಟನೆಯ ಉಗ್ರರ ಎನ್‌ಕೌಂಟರ್ 

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಕಾಶ್ಮೀರದ ಕುಲ್ಗಾಮ್‌ನಲ್ಲಿ ನಡೆದ ಅವಳಿ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿಪಾಕಿಸ್ತಾನಿ ಉಗ್ರರು ಸೇರಿದಂತೆ ಮೂವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಭದ್ರತಾ ಪಡೆ ಹತ್ಯೆ ಮಾಡಿದೆ.

ಕುಲ್ಗಾಮ್‌ನ ಅಟ್ವಾಹೊ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಪೊಲೀಸರು, ಸೇನಾ ಪಡೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಜಂಟಿಯಾಗಿ ಶೋಧ ನಡೆಸಿದೆ. ತಂಡಗಳು ಉಗ್ರರಿರುವ ಸ್ಥಳ ತಲುಪುತ್ತಿದ್ದಂತೆ ಭಯೋತ್ಪಾದಕರು ಭದ್ರತಾ ಪಡೆ ಮೇಲೆ ಮನಬಂದಂತೆ ಗುಂಡಿನ ದಾಳಿ ಮಾಡಿದ್ದಾರೆ.

ಎನ್‌ಕೌಂಟರ್ ವೇಳೆ ಇಬ್ಬರು ಸ್ಥಳೀಯ ಭಯೋತ್ಪಾದಕರ ಹತ್ಯೆ ಮಾಡಲಾಗಿದೆ. ಇವರು ಜೈಶ್ ಸಂಘಟನೆ ಜೊತೆ ನಂಟು ಹೊಂದಿದ್ದರು ಎನ್ನಲಾಗಿದೆ. ಎನ್‌ಕೌಂಟರ್ ನಡೆದ ಸ್ಥಳದಿಂದ ಗನ್, ಪಿಸ್ತೂಲ್, ಗ್ರೆನೇಡ್, ಮ್ಯಾಗಜೀನ್ ಮತ್ತು ಪಿಸ್ತೂಲ್ ಮ್ಯಾಗಜೀನ್ ವಶಪಡಿಸಿಕೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!