Friday, September 30, 2022

Latest Posts

ಸೌದಿ ರಾಜನನ್ನು ಭೇಟಿಯಾದ ಸಚಿವ ಜೈ ಶಂಕರ್:‌ ರಾಜತಾಂತ್ರಿಕ ಸಂಬಂಧಗಳ ಕುರಿತು ಚರ್ಚೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತದ ವಿದೇಶಾಂಗ ಸಚಿವ ಎಸ್.ಜೈ ಶಂಕರ್ ಸೌದಿ ಅರೇಬಿಯಾದ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಅವರನ್ನು ಭೇಟಿ ಮಾಡಿದರು. ಅವರ ಸಭೆಗೆ ಜೆಡ್ಡಾ ನಗರ ವೇದಿಕೆಯಾಗಿತ್ತು. ಭಾರತ ಮತ್ತು ಸೌದಿ ಅರೇಬಿಯಾ ನಡುವಿನ ರಾಜತಾಂತ್ರಿಕ ಸಂಬಂಧಗಳ ಬಗ್ಗೆ ಸೌದಿ ಅರೇಬಿಯಾ ರಾಜನೊಂದಿಗೆ ಮಾತನಾಡಿರುವುದಾಗಿ ಜೈಶಂಕರ್ ತಿಳಿಸಿದರು. ಈ ಕುರಿತು ಟ್ವೀಟ್‌ ಮಾಡಿರುವ ಅವರು, ʻಜೆಡ್ಡಾದಲ್ಲಿ ಗೌರವಾನ್ವಿತರಾದ ಎಚ್‌ಆರ್‌ಎಚ್ ಕಿಂಗ್ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಅವರನ್ನು ಭೇಟಿಯಾಗುತ್ತಿದ್ದು ತುಂಬಾ ಸಂತೋಷ ನೀಡಿದೆ. ಈ ವೇಳೆ ಸೌದಿ ರಾಜ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ ಬಗ್ಗೆ ನಾನು ಅವರಿಗೆ ವಿವರಿಸಿದ್ದೇನೆ. ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಕ್ಕಾಗಿ ಅವರಿಗೆ ನಾನು ಧನ್ಯವಾದ ತಿಳಿಸುತ್ತೇನೆʼ ಎಂದು ಬರೆದಿದ್ದಾರೆ.

ಬಳಿಕ ಜಯಶಂಕರ್ ಅವರು ಸೌದಿ ಅರೇಬಿಯಾದ ವಿದೇಶಾಂಗ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಅವರನ್ನು ಭೇಟಿಯಾಗಿ  ಭಾರತ-ಸೌದಿ ಅರೇಬಿಯಾ ಪಾಲುದಾರಿಕೆ ಮತ್ತು ರಾಜತಾಂತ್ರಿಕತೆಯ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು. ಈ ಸಭೆಯಲ್ಲಿ ಎರಡೂ ದೇಶಗಳ ರಾಜಕೀಯ, ಭದ್ರತೆ, ಸಂಗೀತ ಮತ್ತು ಸಾಂಸ್ಕೃತಿಕ ಸಮಿತಿಗಳು ಸಭೆ ಸೇರಿದ್ದವು.

ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಸಚಿವ ಜೈಶಂಕರ್‌ ಶನಿವಾರ ಸೌದಿಯಲ್ಲಿರುವ ಭಾರತೀಯ ಮೂಲದ ಜನರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಜಯಶಂಕರ್ ಮಾತನಾಡಿ, ಉಕ್ರೇನ್ ಬಿಕ್ಕಟ್ಟಿನ ನಡುವೆಯೂ ಭಾರತದ ಆರ್ಥಿಕತೆಯು ವೇಗವಾಗಿ ಅಭಿವೃದ್ಧಿ ಹೊಂದುತ್ತದೆ ಮತ್ತು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಲಿದೆ ಎಂಬ ಭರವಸೆ ಇದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!