ಇಂದಿನಿಂದ ಮೂರು ದಿನ ಫಿಲಿಪೈನ್ಸ್‌ ಪ್ರವಾಸದಲ್ಲಿ ವಿದೇಶಾಂಗ ಸಚಿವ ಎಸ್.‌ ಜೈಶಂಕರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇಂದಿನಿಂದ ಮೂರು ದಿನಗಳ ಕಾಲ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.‌ ಜೈಶಂಕರ್‌ ಫಿಲಿಪೈನ್ಸ್‌ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ಪ್ರವಾಸದಲ್ಲಿ ಉಭಯ ರಾಷ್ಟ್ರಗಳ ನಡುವಿನ ಪ್ರದೇಶಿಕ ಹಾಗೂ ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಸಚಿವಾಲಯ ತಿಳಿಸಿದೆ.
ವಿದೇಶಾಂಗ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಫಿಲಿಪೈನ್ಸ್‌ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ವೇಳೆ ಅವರು ಫಿಲಿಪೈನ್ಸ್‌ನ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಟಿಯೊಡೊರೊ ಎಲ್.ಲೊಕ್ಸಿನ್ ಜೂನಿಯರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಜತೆಗೆ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ಈ ಹಿಂದೆ 2020ರಲ್ಲಿ ನಡೆದ ದ್ವಿಪಕ್ಷೇಯ ಸಹಕಾರದ ಮೇಲೆ ಜಂಟಿ ಆಯೋಗದ ಸಭೆಯಲ್ಲಿ ಫಿಲಿಪೈನ್ಸ್‌ ಹಾಗೂ ಭಾರತ ಭಾಗಿಯಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!