ಜೈಸ್ವಾಲ್, ಬಟ್ಲರ್‌ ಅಬ್ಬರ: ಡೆಲ್ಲಿ ಗೆಲುವಿಗೆ ಬೃಹತ್ ಟಾರ್ಗೆಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್‌ ಅಬ್ಬರದ ಅರ್ಧಶತಕಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು 4 ವಿಕೆಟ್ ಕಳೆದುಕೊಂಡು 199 ರನ್ ಬಾರಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ರಾಜಸ್ಥಾನ ರಾಯಲ್ಸ್‌ ತಂಡಕ್ಕೆ ಯಶಸ್ವಿ ಜೈಸ್ವಾಲ್ ಮೊದಲ ಓವರ್‌ನಲ್ಲೇ 5 ಬೌಂಡರಿ ಸಿಡಿಸುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು.

ಮೊದಲ ವಿಕೆಟ್‌ಗೆ ಜೋಸ್ ಬಟ್ಲರ್ ಹಾಗೂ ಯಶಸ್ವಿ ಜೈಸ್ವಾಲ್ ಜೋಡಿ ಮೊದಲ ಓವರ್‌ನಲ್ಲೇ 50 ರನ್‌ಗಳನ್ನು ಸಿಡಿಸಿದರು.
ಸ್ಪೋಟಕ ಬ್ಯಾಟಿಂಗ್ ನಡೆಸಿದ ಯಶಸ್ವಿ ಜೈಸ್ವಾಲ್ ಕೇವಲ 31 ಎಸೆತಗಳಲ್ಲಿ 11 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 60 ರನ್ ಬಾರಿಸಿ ಪೆವಿಲಿಯನ್ ಸೇರಿದರು.

ಜೈಸ್ವಾಲ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ನಾಯಕ ಸಂಜು ಸ್ಯಾಮ್ಸನ್‌ ಖಾತೆ ತೆರೆಯುವ ಮುನ್ನವೇ ಪೆವಿಲಿಯನ್ನಿಗಟ್ಟುವಲ್ಲಿ ಕುಲ್ದೀಪ್ ಯಾದವ್ ಯಶಸ್ವಿಯಾದರು. ಇನ್ನು ರಿಯಾನ್‌ ಪರಾಗ್ ಕೂಡಾ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನೆಲೆಯೂರಲು ರೋವ್ಮನ್ ಪೋವೆಲ್ ಅವಕಾಶ ನೀಡಲಿಲ್ಲ. ಪರಾಗ್ 7 ರನ್ ಬಾರಿಸಿ ಕ್ಲೀನ್ ಬೌಲ್ಡ್‌ ಆಗಿ ಪೆವಿಲಿಯನ್ ಸೇರಿದರು.

ಮತ್ತೊಂದು ತುದಿಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಜೋಸ್ ಬಟ್ಲರ್‌, ಮತ್ತೊಂದು ಆಕರ್ಷಕ ಇನಿಂಗ್ಸ್‌ ಆಡಿದರು. ಬಟ್ಲರ್ 51 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 79 ರನ್ ಬಾರಿಸಿ ಮುಕೇಶ್ ಕುಮಾರ್‌ಗೆ ಎರಡನೇ ಬಲಿಯಾದರು. ಇನ್ನು ಕೊನೆಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಶಿಮ್ರೊನ್ ಹೆಟ್ಮೇಯರ್ ಕೇವಲ 21 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 39 ರನ್ ಸಿಡಿಸಿದರೆ, ದೇವದತ್ ಪಡಿಕ್ಕಲ್ ಬದಲಿಗೆ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿರುವ ಧೃವ್ ಜ್ವರೆಲ್ 3 ಎಸೆತಗಳಲ್ಲಿ ಒಂದು ಸಿಕ್ಸರ್ ಸಹಿತ ಅಜೇಯ 8 ರನ್ ಬಾರಿಸಿ ತಂಡದ ಮೊತ್ತವನ್ನು ಇನ್ನೂರರ ಸಮೀಪಕ್ಕೆ ಕೊಂಡೊಯ್ಯದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!