ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುವ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ (93*) ಹಾಗೂ ನಾಯಕ ಶುಭಮನ್ ಗಿಲ್ (58*) ಬಿರುಸಿನ ಆಟದಿಂದ ಟೀಮ್ ಇಂಡಿಯಾ, ಆತಿಥೇಯ ಜಿಂಬಾಬ್ವೆ ವಿರುದ್ಧ ಟಿ20 ಪಂದ್ಯದಲ್ಲಿ 10 ವಿಕೆಟ್ ಅಂತರದ ಭರ್ಜರಿ ಜಯ ಗಳಿಸಿದೆ.
ಆ ಮೂಲಕ ಐದು ಪಂದ್ಯಗಳ ಟಿ20 ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಉಳಿದಿರುವಂತೆಯೇ 3-1ರ ಅಂತರದಲ್ಲಿ ವಶಪಡಿಸಿಕೊಂಡಿದೆ.
153 ರನ್‌ಗಳ ಗುರಿ ಬೆನ್ನಟ್ಟಿದ ಭಾರತ 15.2 ಓವರ್‌ಗಳಲ್ಲೇ ಯಾವುದೇ ವಿಕೆಟ್ ನಷ್ಟವಿಲ್ಲದೆ ಗುರಿ ತಲುಪಿತು.
ಬಿರುಸಿನ ಆಟವಾಡಿದ ಜೈಸ್ವಾಲ್ 53 ಎಸೆತಗಳಲ್ಲಿ 93 ರನ್ ಗಳಿಸಿ ಔಟಾಗದೆ ಉಳಿದರು. ಮತ್ತೊಂದೆಡೆ ನಾಯಕನ ಆಟವಾಡಿದ ಗಿಲ್, 39 ಎಸೆತಗಳಲ್ಲಿ ಅಜೇಯ 58 ರನ್ ಗಳಿಸಿದರು. ಆ ಮೂಲಕ ಸತತ ಎರಡನೇ ಅರ್ಧಶತಕದ ಸಾಧನೆ ಮಾಡಿದರು.