Saturday, October 11, 2025

ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ಜೈಸ್ವಾಲ್: ಮೊದಲ ದಿನದಾಟ ಅಂತ್ಯಕ್ಕೆ ಭಾರತ 318/2

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಮೊದಲ ದಿನದಾಟದ ಅಂತ್ಯಕ್ಕೆ ಕೇವಲ 2 ವಿಕೆಟ್ ಕಳೆದುಕೊಂಡು 318 ರನ್ ಕಲೆಹಾಕಿದ್ದು, ಬೃಹತ್ ಮೊತ್ತದತ್ತ ದಾಪುಗಾಲಿರಿಸಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ಆರಂಭವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭ್ ಮನ್ ಗಿಲ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ಕೆಎಸ್ ರಾಹುಲ್ ಜೋಡಿ ಮೊದಲ ವಿಕೆಟ್ ಗೆ 58 ರನ್ ಗಳ ಕಲೆಹಾಕಿತು.

ಬಳಿಕ ಜೈಸ್ವಾಲ್ ಜೊತೆಗೂಡಿದ ಸಾಯಿಸುದರ್ಶನ್ ಕೂಡ ಉತ್ತಮ ಬ್ಯಾಟಿಂಗ್ ನಡೆಸಿದರು. 2ನೇ ವಿಕೆಟ್ ಗೆ ಈ ಜೋಡಿ ಬರೊಬ್ಬರಿ 193 ರನ್ ಗಳ ದಾಖಲೆಯ ಜೊತೆಯಾಟವಾಡಿತು. ಈ ಹಂತದಲ್ಲಿ 87 ರನ್ ಗಳಿಸಿ ಶತಕದತ್ತ ದಾಪುಗಾಲಿರಿಸಿದ್ದ ಸುದರ್ಶನ್ ಮತ್ತೆ ವರಿಕಾಮ್ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದರು.

3ನೇ ವಿಕೆಟ್ ಗೆ ಜೈಸ್ವಾಲ್ ಮತ್ತು ಗಿಲ್ ಜೋಡಿ 67 ರನ್ ಕಲೆಹಾಕಿದ್ದು, 2ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದೆ.

ಯಶಸ್ವಿ ಜೈಸ್ವಾಲ್ ಬರೊಬ್ಬರಿ 253 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 22 ಬೌಂಡರಿಗಳ ಸಹಿತ 173 ರನ್ ಕಲೆಹಾಕಿದ್ದಾರೆ.

error: Content is protected !!