April 4, 2026
Saturday, April 4, 2026
spot_img

ಜೈಸ್ವಾಲ್, ಜುರೆಲ್ ಸ್ಫೋಟಕ ಬ್ಯಾಟಿಂಗ್: ಗುಜರಾತ್ ಗೆಲುವಿಗೆ 211 ರನ್​ಗಳ ಬಿಗ್ ಟಾರ್ಗೆಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜೈಸ್ವಾಲ್, ಧ್ರುವ್ ಜುರೆಲ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್‌ ತಂಡ 210 ರನ್‌ಗಳ ಬೃಹತ್ ಮೊತ್ತ ದಾಖಲಿಸಿದ್ದು, ಗುಜರಾತ್ ಟೈಟಾನ್ಸ್ ಗೆಲುವಿಗೆ ಸವಾಲಿನ ಟಾರ್ಗೆಟ್ ನೀಡಿದೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನಕ್ಕೆ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಭರ್ಜರಿ ಆರಂಭ ಒದಗಿಸಿಕೊಟ್ಟರು. 31 ರನ್‌ಗಳಿಸಿದ್ದ ವೈಭವ್ ರಶೀದ್ ಖಾನ್ ಬೌಲಿಂಗ್‌ನಲ್ಲಿ ಗ್ಲೆನ್ ಫಿಲಿಪ್ಸ್‌ಗೆ ಕ್ಯಾಚ್ ನೀಡಿ ಔಟ್ ಆದರು. ಎರಡನೇ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್ ಜೊತೆ ಸೇರಿದ ಧ್ರುವ್ ಜುರೆಲ್ 56 ರನ್‌ಗಳ ಜೊತೆಯಾಟ ನಡೆಸಿದರು. ಜೈಸ್ವಾಲ್ 36 ಎಸೆತಗಳಲ್ಲಿ 6 ಬೌಂಡರಿ, 3 ಸಿಕ್ಸರ್‌ಗಳ ಸಹಿತ 55 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು.

ನಂತರ ಬಂದ ನಾಯಕ ರಿಯಾನ್ ಪರಾಗ್ 8, ಹೆಟ್ಮೆಯರ್ 18 ರನ್ ಗಲಿ ಔಟಾದರು. ಜುರೆಲ್ 42 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್‌ಗಳ ನೆರವಿನಿಂದ 75 ರನ್‌ಗಳಿಸಿವಿಕೆಟ್​ ಒಪ್ಪಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !