ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಶಸ್ವಿ ಜೈಸ್ವಾಲ್ ಹಾಗೂ ಕೆ.ಎಲ್ ರಾಹುಲ್ ದಾಖಲೆಯ ಶತಕದ ಜೊತೆಯಾಟ ನೆರವಿನಿಂದ ಟೀಂ ಇಂಡಿಯಾ ಆಸೀಸ್ ವಿರುದ್ಧ 218 ರನ್‌ಗಳ ಭರ್ಜರಿ ಮುನ್ನಡೆ ಸಾಧಿಸಿದೆ.
ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 2ನೇ ದಿನದ ಅಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೇ ಭಾರತ 172 ರನ್ ಕಲೆಹಾಕಿದೆ. ಈ ಮೂಲಕ ಆಸ್ಟ್ರೇಲಿಯಾ ವಿರುದ್ಧ 218 ರನ್‌ಗಳ ಮುನ್ನಡೆ ಸಾಧಿಸಿದೆ.
ಯಶಸ್ವಿ ಜೈಸ್ವಾಲ್ ಅಜೇಯ 90 ರನ್ (193 ಎಸೆತ, 7 ಬೌಂಡರಿ, 2 ಸಿಕ್ಸರ್), ಕೆ.ಎಲ್ ರಾಹುಲ್ 62 ರನ್ (153 ಎಸೆತ, 4 ಬೌಂಡರಿ) ಗಳಿಸಿದ್ದು, ಭಾನುವಾರ 3ನೇ ದಿನದ ಆಟ ಮುಂದುವರಿಸಲಿದ್ದಾರೆ.