ಹೊಸದಿಗಂತ ಡಿಜಿಟಲ್ ಡೆಸ್ಕ್ :
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಆಕರ್ಷಕ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಮೊದಲ ಪಂದ್ಯದಲ್ಲೇ ಹಾಫ್ ಸೆಂಚುರಿಸಿದ ಸಾಧಕರ ಪಟ್ಟಿಗೆ ಸೇರ್ಪಡೆಯಾದರು.
ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಆಯ್ದುಕೊಂಡು 150 ರನ್ಗಳಿಗೆ ಆಲೌಟ್ ಆಯಿತು.
ಇದಾದ ಬಳಿಕ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಈ ಜೊತೆ ಶತಕದ ಜೊತೆಯಾಟವಾಡಿದರು. ಈ ಹಂತದಲ್ಲಿ ಅಲ್ಝಾರಿ ಜೋಸೆಫ್ ಎಸೆತವನ್ನು ಬೌಂಡರಿಗಟ್ಟುವ ಮೂಲಕ ಯಶಸ್ವಿ ಜೈಸ್ವಾಲ್ 104 ಎಸೆತಗಳಲ್ಲಿ ತಮ್ಮಚೊಚ್ಚಲ ಅರ್ಧಶತಕ ಪೂರೈಸಿದರು. ಈ ಮೂಲಕ ಪಾದಾರ್ಪಣೆ ಪಂದ್ಯದಲ್ಲೇ ಅರ್ಧಶತಕ ಬಾರಿಸಿದ ಭಾರತದ 13ನೇ ಆರಂಭಿಕ ಆಟಗಾರ ಎನಿಸಿಕೊಂಡರು. ಮತ್ತೊಂದೆಡೆ ಅನುಭವವನ್ನು ಧಾರೆಯೆರದ ರೋಹಿತ್ ಶರ್ಮಾ 106 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು.