ಜಲ ಮಂಡಳಿ ಪ್ರಕರಣ: ಇಡಿ ತನಿಖೆಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೈರು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ದೆಹಲಿ ಜಲ ಮಂಡಳಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ಗೈರಾಗಿದ್ದಾರೆ.

ಇತ್ತ ಕೇಂದ್ರ ಸರ್ಕಾರವು ಕೇಜ್ರಿವಾಲ್ ಅವರನ್ನು ಗುರಿಯಾಗಿಸಲು ಮತ್ತು ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡುವುದನ್ನು ತಡೆಯಲು ಜಾರಿ ನಿರ್ದೇಶನಾಲಯವನ್ನು (ಇ.ಡಿ) ಬಳಸುತ್ತಿದೆ. ಸಮನ್ಸ್ ಕಾನೂನುಬಾಹಿರವಾಗಿದೆ. ಇ.ಡಿ ಬಳಸಿ ಲೋಕಸಭೆ ಚುನಾವಣೆ ಎದುರಿಸಲು ಬಿಜೆಪಿ ಬಯಸಿದೆ ಎಂದು ಎಎಪಿ ಆರೋಪಿಸಿದೆ.

ದೆಹಲಿ ಜಲ ಮಂಡಳಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸೋಮವಾರ ತನ್ನ ಮುಂದೆ ಹಾಜರಾಗುವಂತೆ ಇ.ಡಿ ಅರವಿಂದ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿತ್ತು.ಕೇಜ್ರಿವಾಲ್ ಅವರು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿಯೂ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಈ ಹಿಂದೆ ಇ.ಡಿ ನೀಡಿದ್ದ ಎಂಟು ಸಮನ್ಸ್‌ಗಳನ್ನು ಕಾನೂನುಬಾಹಿರ ಎಂದು ಕರೆದಿದ್ದು, ವಿಚಾರಣೆಗೆ ಗೈರಾಗಿದ್ದಾರೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾರ್ಚ್ 21 ರಂದು ವಿಚಾರಣೆಗೆ ಹಾಜರಾಗುವಂತೆ ತನಿಖಾ ಸಂಸ್ಥೆಯು ಕೇಜ್ರಿವಾಲ್ ಅವರಿಗೆ ಒಂಬತ್ತನೇ ಸಮನ್ಸ್ ಜಾರಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!