ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ಜಲ್ಲಿಕಟ್ಟು ಕ್ರೀಡೆಯಲ್ಲಿ ಇಬ್ಬರು ಮೃತಪಟ್ಟಿದ್ದು, 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಇಂದು ಶಿವಗಂಗಾ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜಕೀಯ ಗಣ್ಯರೂ ಭಾಗಿಯಾಗಿದ್ದರು. ಒಟ್ಟಾರೆ 81 ಗೂಳಿ ಪಳಗಿಸುವವರು ಹಾಗೂ 271 ಗೂಳಿಗಳು ಸ್ಥಳದಲ್ಲಿದ್ದವು.
ಗೂಳಿ ಪಳಗಿಸುವ ಕ್ರೀಡೆಯಲ್ಲಿ ಇಬ್ಬರು ಮೃತಪಟ್ಟಿದ್ದು, 70 ಮಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲೇ ವೈದ್ಯಕೀಯ ಸಿಬ್ಬಂದಿ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು.