ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರಮನೆ ಮೈದಾನದಿಂದ ಜಂಬೂಸವಾರಿ ಹೊರಡಲು ಇನ್ನೇನು ಕೆಲವೇ ಗಂಟೆಗಳು ಬಾಕಿಯಿದ್ದು, ಜಂಬೂಸವಾರಿ ವೀಕ್ಷಣೆಗೆ ಬರುವವರ ತಪಸಾಣೆ ಮುಂದುವರಿದಿದೆ. ವೀಕ್ಷಕರಿಗೆ ಮೈದಾನದಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದ್ದು, 12ಗಂಟೆ ಬಳಿಕ ನಿಗದಿತ ದ್ವಾರದಿಂದ ಪ್ರವೇಶಕ್ಕೆ ಅನುಮತಿಲಾಗಿದೆ.
ಯಾವುದೇ ಅಹಿರತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದ್ದು, 11 ಐಪಿಎಸ್ ಅಧಿಕಾರಿಗಳು ಸೇರಿ 4,000 ಪೊಲೀಸರನ್ನು ನಿಯೋಜಿಸಲಾಗಿದೆ. ಕಾನೂನು ಸುವ್ಯವಸ್ಥೆ ಡಿಸಿಪಿ ಎಂ.ಮುತ್ತುರಾಜ್ ನೇತೃತ್ವದಲ್ಲಿ ಭದ್ರತಾ ಪರಿಶೀಲನೆ ಹೆಚ್ಚಿದೆ.
ಸಂಜೆ 4.40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂಸವಾರಿಯಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.