ಹೊಸದಿಗಂತ ವರದಿ, ಶಿವಮೊಗ್ಗ:
ಸಂವಿಧಾನಕ್ಕೆ ಅಪಮಾನ ಮಾಡಿರುವ ಸಚಿವ ಜಮೀರ್ ಅಹ್ಮದ್ ಅವರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷ ಮುಸ್ಲಿಂರಿಗೆ ಸ್ಪೀಕರ್ ಸ್ಥಾನ ನೀಡಿದೆ. ಈಗಿರುವ ಸ್ಪೀಕರ್ ಅವರಿಗೆ ಎಲ್ಲಾ ಶಾಸಕರು ತಲೆಬಾಗಿ ನಮಸ್ಕರಿಸಬೇಕು ಎಂದು ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಹೇಳಿಕೆ ನೀಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದ ಸಂವಿಧಾನದ ಪ್ರಕಾರ ಆಡಳಿತ ನಡೆಸುತ್ತಿದೆಯೊ ಅಥವಾ ಪಾಕಿಸ್ಥಾನದ ಇಸ್ಲಾಮಿಕ್ ಸಂವಿಧಾನದ ಪ್ರಕಾರ ಆಡಳಿತ ನಡೆಸುತ್ತಿದೆಯೋ ಎಂಬುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು