ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಚಿತ್ರ ಜೇಮ್ಸ್ ಗೆ ಈಗಾಗಲೇ ಭಾರೀ ಬೇಡಿಕೆ ಇದ್ದು, ಅಭಿಮಾನಿಗಳಿಗೆ ಚಿತ್ರತಂಡ ಸಿಹಿ ಸುದ್ದಿಯೊಂದನ್ನು ಕೊಟ್ಟಿದೆ.
ಫೆ.11 ಬೆಳಗ್ಗೆ 11:11ಕ್ಕೆ ಜೇಮ್ಸ್ ಚಿತ್ರದ ಟೀಸರ್ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ಬಗ್ಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಫೆಬ್ರವರಿ 11 ರಂದು ಬೆಳಿಗ್ಗೆ 11.11 ಕ್ಕೆ ಜೇಮ್ಸ್ ಅಧಿಕೃತ ಟೀಸರ್ ಬಿಡುಗಡೆಯಾಗಲಿದೆ.
James Official Teaser will be releasing on 11th February at 11.11 AM.@PRKAudio @PriyaAnand #KishorePathikonda @BahaddurChethan @actorsrikanth @realsarathkumar @charanrajmr2701 #BoloBoloJames pic.twitter.com/D04VXGUsI4
— Ashwini Puneeth Rajkumar (@ashwinipuneet) February 5, 2022
ಗಣರಾಜ್ಯೋತ್ಸವದಂದು ಪುನೀತ್ ಅವರ ಪೋಸ್ಟರ್ ಅನ್ನು ಸೈನಿಕನ ಗೆಟಪ್ ನಲ್ಲಿ ರಿಲೀಸ್ ಮಾಡಿದ್ದು, ಆ ಪೋಸ್ಟರ್ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ.
ಈ ಚಿತ್ರಕ್ಕೆ ಚೇತನ್ ಕುಮಾರ್ ನಿರ್ದೇಶನ ಮಾಡಿದ್ದು, ಪ್ರಿಯಾ ಆನಂದ್ ಅವರು ಪುನೀತ್ ಗೆ ಜೋಡಿಯಾಗಿ ಜೇಮ್ಸ್ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚರಣ್ ರಾಜ್ ಚಿತ್ರದ ಹಾಡುಗಳಿಗೆ ಸಂಗೀತ ನಿರ್ದೇಶನ ಮಾಡಿದ್ದು, ಪುನೀತ್ ಸೋದರರಾದ ರಾಘವೇಂದ್ರ ರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್ ಜೇಮ್ಸ್ ಚಿತ್ರದಲ್ಲಿ ವಿಶೇಷವಾಗಿ ಎಂಟ್ರಿ ಕೊಟ್ಟಿದ್ದಾರೆ.