ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಚುನಾವಣೆ ಬಳಿಕ ಡಿ.ಕೆ.ಶಿವಕುಮಾರ್ ಅವರು ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಜನಾಂಗೀಯ ನಿಂದನೆ ಮಾಡಿದ್ದು ತಪ್ಪು ಎಂದು ಒಪ್ಪಿಕೊಂಡಿದ್ದಾರೆ.
ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಜಮೀರ್ ಮಾತಾಡಿದ್ದನ್ನು ತಪ್ಪು ಅಂತ ಅಂಗೀಕರಿಸಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಹೇಳಲಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರು ಸಹ ಜಮೀರ್ ಮೇಲೆ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಜಮೀರ್ ಪದಬಳಕೆ ಪಕ್ಷದ ಇಮೇಜಿಗೆ ಡ್ಯಾಮೇಜ್ ಉಂಟುಮಾಡಿದೆ, ಚುನಾವಣೆಯ ಮೇಲೂ ಪರಿಣಾಮ ಬೀರಿದೆ ಎಂದಿದ್ದಾರೆ.