ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ಭೀಕರ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನಾಳೆ ಸರ್ವಪಕ್ಷ ಸಭೆ ಕರೆದಿದ್ದಾರೆ.
“ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ನಂತರ, ನಾಳೆ ಮಧ್ಯಾಹ್ನ ನಾನು ಸರ್ವಪಕ್ಷ ಸಭೆ ಕರೆದಿದ್ದೇನೆ. ನಾನು ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳಿಗೆ, ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರು ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಿಗೆ ಆಹ್ವಾನ ಪತ್ರಗಳನ್ನು ಕಳುಹಿಸಿದ್ದೇನೆ” ಎಂದು ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.