ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಡಿ ಪ್ರದೇಶಗಳಲ್ಲಿನ ಪ್ರಸ್ತುತ ಪರಿಸ್ಥಿತಿ ಕುರಿತು ಚರ್ಚಿಸಲು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಇಂದು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.
ಸಭೆಯಲ್ಲಿ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಸಹ ಉಪಸ್ಥಿತರಿದ್ದರು.
ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಖಚಿತಪಡಿಸಿಕೊಳ್ಳಲು ಬಿಎಸ್‌ಎಫ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಇಂದು ಜಮ್ಮು ಮತ್ತು ಕಾಶ್ಮೀರ ಗಡಿ ಜಿಲ್ಲೆಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.