ಜಮ್ಮು ಮತ್ತು ಕಾಶ್ಮೀರ ಚುನಾವಣೆ: ಮೊದಲ ಹಂತದ ಮತದಾನಕ್ಕೆ ಚುನಾವಣಾ ಆಯೋಗದಿಂದ ಅಧಿಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚುನಾವಣಾ ಆಯೋಗವು ಇಂದು ಜಮ್ಮು ಮತ್ತು ಕಾಶ್ಮೀರದ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಅಧಿಸೂಚನೆಯನ್ನು ಹೊರಡಿಸಲಿದೆ.

ಕಳೆದ ವಾರ ಚುನಾವಣಾ ದಿನಾಂಕಗಳನ್ನು ಘೋಷಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಚುನಾವಣಾ ಪ್ರಕ್ರಿಯೆಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ಬಾರಿಗೆ 2014 ರಲ್ಲಿ ವಿಧಾನಸಭೆ ಚುನಾವಣೆ ನಡೆದಿದ್ದು, ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು 90 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ . ಅಕ್ಟೋಬರ್ 4 ರಂದು ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!