ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಯನ್ನು ಗುರಿಯಾಗಿಸಿಕೊಂಡು ಉಗ್ರರು ಶನಿವಾರ ದಾಳಿ ನಡೆಸಿದ್ದು, ಇದರಲ್ಲಿ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯಲ್ಲಿ ಇಬ್ಬರು ಪೊಲೀಸರು ಹಾಗೂ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ. ಇತರ ಮೂವರು ಪೊಲೀಸರು ಸೇರಿದಂತೆ ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್ ಹೇಳಿದ್ದಾರೆ.
ಮೂಲಗಳ ಪ್ರಕಾರ, ಉತ್ತರ ಕಾಶ್ಮೀರದ ಸೊಪೋರ್ನ ಅರಂಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಪೊಲೀಸ್ ಹಾಗೂ ಸಿಆರ್ಪಿಎಫ್ ಜಂಟಿ ತಂಡದ ಮೇಲೆ ಗುಂಡು ಹಾರಿಸಿದ್ದಾರೆ. ‘ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅವರು ಹೇಳಿದರು.