ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರಕ್ಕೆ ಶೀಘ್ರದಲ್ಲೇ ರಾಜ್ಯದ ಸ್ಥಾನಮಾನ ಮರುಸ್ಥಾಪನೆಯಾಗಲಿದೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ನಡೆದು ಆರು ತಿಂಗಳು ಕಳೆದಿವೆ, ಈಗ ಸೂಕ್ತ ಸಮಯ ಬಂದಿದೆ ಎಂದು ನಾವು ಭಾವಿಸುತ್ತೇವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದೇನೆ, ಈ ಬಗ್ಗೆ ಮಾತುಕತೆಯು ನಡೆದಿದೆ . ಜಮ್ಮು ಮತ್ತು ಕಾಶ್ಮೀರ ಶೀಘ್ರದಲ್ಲೇ ತನ್ನ ರಾಜ್ಯತ್ವವನ್ನು ಮರಳಿ ಪಡೆಯುತ್ತದೆ ಎಂದು ನಾನು ಆಶಿಸುತ್ತೇನೆ ಎಂದು ಅಬ್ದುಲ್ಲಾ ಹೇಳಿದ್ದಾರೆ.
ವಕ್ಫ್ ತಿದ್ದುಪಡಿ ಕುರಿತು ಕಾಯ್ದೆಯ ಚರ್ಚೆಯನ್ನು ಆಡಳಿತ ಪಕ್ಷವು ಅಡ್ಡಿಪಡಿಸಿದೆ ಎಂಬ ವಿರೋಧ ಪಕ್ಷದ ಆರೋಪಕ್ಕೆ ಸಂಬಂಧಿಸಿದಂತೆ, ಮಸೂದೆಯನ್ನು ಸಂಸತ್ತು ಅಂಗೀಕರಿಸಿದ್ದರಿಂದ ಮುಂದೂಡಿಕೆ ನಿರ್ಣಯವನ್ನು ಅಂಗೀಕರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.