Monday, September 25, 2023

Latest Posts

ಜಮ್ಮು-ಕಾಶ್ಮೀರ 370ನೇ ವಿಧಿ ರದ್ಧತಿ ಪ್ರಶ್ನಿಸಿ ಅರ್ಜಿಗಳ ವಿಚಾರಣೆ ಮುಕ್ತಾಯ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ ತೀರ್ಪನ್ನು ಕಾಯ್ದಿರಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಎಸ್​.ಕೆ.ಕೌಲ್, ಸಂಜೀವ್ ಖನ್ನಾ, ಬಿ.ಆರ್​.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐವರು ನ್ಯಾಯಮೂರ್ತಿಗಳ ಪೀಠವು 16 ದಿನಗಳ ಕಾಲ ಅರ್ಜಿಗಳನ್ನು ಆಲಿಸಿತು.

ಮಂಗಳವಾರ ಅರ್ಜಿದಾರರ ಕಡೆಯ ವಕೀಲರು ತಮ್ಮ ವಾದವನ್ನು ಮುಕ್ತಾಯಗೊಳಿಸಿದರು. ನಂತರ ಸರ್ವೋಚ್ಛ ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿತು.

ಕೇಂದ್ರ ಸರ್ಕಾರವನ್ನು ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿನಿಧಿಸಿದ್ದರು. 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿದ್ದ ಅರ್ಜಿದಾರರನ್ನು ಹಿರಿಯ ವಕೀಲರಾದ ಕಪಿಲ್ ಸಿಬಲ್, ರಾಜೀವ್ ಧವನ್, ಗೋಪಾಲ್ ಸುಬ್ರಮಣಿಯಂ, ದುಶ್ಯಂತ್ ದವೆ, ಜಾಫರ್ ಶಾ, ಗೋಪಾಲ್ ಶಂಕರನಾರಾಯಣನ್ ಪ್ರತಿನಿಧಿಸಿ ವಾದ ಮಂಡಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!