ಜಮ್ಮು- ಕಾಶ್ಮೀರ ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಜಮ್ಮು ಮತ್ತು ಕಾಶ್ಮೀರ ಮಾಜಿ ಶಾಸಕ, ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಅವರು ಗುರುವಾರ ಶ್ರೀನಗರದ ತುಳಸಿ ಬಾಗ್‌ನಲ್ಲಿರುವ ಸರ್ಕಾರಿ ಕ್ವಾರ್ಟರ್‌ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಾನ್ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಈ ತೀವ್ರ ನಡೆಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.

ಖಾನ್ 1996 ರಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಪಕ್ಷೇತರ ಶಾಸಕರಾಗಿಆಯ್ಕೆಯಾಗಿದ್ದರು. ನಂತರ ಅವರು 2024 ರ ಚುನಾವಣೆಗೆ ಮುನ್ನ ಬಿಜೆಪಿ ಸೇರಿದರು ಮತ್ತು ಚುನಾವಣೆಯಲ್ಲಿ ಕೇಸರಿ ಪಕ್ಷದಿಂದ ಸ್ಪರ್ಧಿಸಿದ್ದರು. ಆದರೆ ಎನ್‌ಸಿಯ ನಜೀರ್ ಅಹ್ಮದ್ ಗುರೇಜಿ ವಿರುದ್ಧ ಸೋಲು ಅನುಭವಿಸಿದ್ದರು.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!