ಜಮ್ಮು- ಕಾಶ್ಮೀರದ 2024-25ನೇ ಸಾಲಿನ ಬಜೆಟ್‌ಗೆ ಲೋಕಸಭೆಯಲ್ಲಿ ಅನುಮೋದನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಜಮ್ಮು ಮತ್ತು ಕಾಶ್ಮೀರದ 2024-25ನೇ ಸಾಲಿನ ಬಜೆಟ್‌ಗೆ ಲೋಕಸಭೆಯಲ್ಲಿ ಮಂಗಳವಾರ ಅನುಮೋದನೆ ದೊರೆತಿದೆ.

ಧ್ವನಿ ಮತದ ಮೂಲಕ ಜಮ್ಮ ಮತ್ತು ಕಾಶ್ಮೀರದ ಬಜೆಟ್‌ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅನುಮೋದನೆ ಪಡೆದರು.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಪಡಿಸಿದ ನಂತರ ಅಲ್ಲಿ ಚುನಾಯಿತ ಸರ್ಕಾರ ಇನ್ನಷ್ಟೇ ಸ್ಥಾಪನೆಯಾಗಬೇಕಿದೆ. ಹೀಗಾಗಿ ಹಿಂದಿನ ಸಾಲಿನಂತೆಯೇ ಜಮ್ಮು ಮತ್ತು ಕಾಶ್ಮೀರದ ಬಜೆಟ್‌ ಅನ್ನು ಲೋಕಸಭೆಯಲ್ಲಿ ಈ ಬಾರಿಯೂ ಮಂಡಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!