ಉತ್ತರ ಕಾಶ್ಮೀರದಲ್ಲಿ ಇಬ್ಬರು ಪಾಕಿಗಳು ಸೇರಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಉತ್ತರ ಕಾಶ್ಮೀರದಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ ನಡೆಸಲಾದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಇಬ್ಬರು ಪಾಕಿಸ್ತಾನಿ ಉಗ್ರರು ಸೇರಿದಂತೆ ಮೂವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಕುಪ್ವಾರ ಜಿಲ್ಲೆಯ ಚಕ್ತಾರಸ್ ಕಂಡಿ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಒಬ್ಬ ಸೇರಿದಂತೆ ಇಬ್ಬರು ಎಲ್‌ಇಟಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದಕ್ಕೂ ಮೊದಲು, ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಲಷ್ಕರ್-ಎ-ತೊಯ್ಬಾದ ಮತ್ತೊಬ್ಬ ಪಾಕಿಸ್ತಾನಿ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದವು.
ಸೋಪೋರ್‌ನ ಜಲೂರಾ ಪ್ರದೇಶದ ಪಾನಿಪೋರಾ ಅರಣ್ಯದಲ್ಲಿ ಭಯೋತ್ಪಾದಕರ ಅಡಗಿರುವ ಬಗ್ಗೆ ನಿನ್ನೆ ಸಂಜೆ ಭದ್ರತಾಪಡೆಗಳಿಗೆ ಗುಪ್ತಚರ ಮಾಹಿತಿ ಲಭ್ಯವಾಗಿತ್ತು. ತಕ್ಷಣವೇ ಕಾರ್ಯಾಚಣೆಗಳಿದ ಭದ್ರತಾ ಪಡೆಗಳ ಜಂಟಿ ತಂಡವು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಭಯೋತ್ಪಾದಕರ ಮೇಲೆ ಗುಂಡಿನ ಮಳೆಗರೆದವು.
ಎನ್‌ಕೌಂಟರ್ ಸ್ಥಳದಲ್ಲಿ ವಶಪಡಿಸಿಕೊಂಡಿರುವ ದಾಖಲೆಗಳ ಪ್ರಕಾರ, ಹತನಾದ ಭಯೋತ್ಪಾದಕನನ್ನು ಪಾಕಿಸ್ತಾನದ ಲಾಹೋರ್‌ನ ಹಂಝಲ್ಲಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಬಳಿಯಿಂದ ಒಂದು ಎಕೆ 47 ರೈಫಲ್, ಐದು ಮ್ಯಾಗಜೀನ್‌ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!