ಜಮ್ಮು- ಕಾಶ್ಮೀರ ಅಂತಿಮ ಹಂತದ ಚುನಾವಣೆ: ಶೇ.65ಕ್ಕೂ ಹೆಚ್ಚು ಮತದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆಯ ಮೂರನೇ ಮತ್ತು ಅಂತಿಮ ಹಂತದ ಮತದಾನದ ಮಂಗಳವಾರ ಮುಕ್ತಾಯವಾಗಿದ್ದು, ಶೇ.65ಕ್ಕೂ ಹೆಚ್ಚು ಮತದಾನವಾಗಿದೆ.

ಆಯೋಗದ ಅಂಕಿಅಂಶಗಳ ಪ್ರಕಾರ ಇಂದು ನಡೆದ ಅಂತಿಮ ಹಂತದ ಚುನಾವಣೆಯಲ್ಲಿ ಸಂಜೆ 5 ಗಂಟೆಯವರೆಗೆ ಶೇ. 65.48 ರಷ್ಟು ಮತದಾನವಾಗಿದೆ.
ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳ 40 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಗಿ ಭದ್ರತೆಯ ನಡುವೆ ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಯಿತು ಮತ್ತು ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದೆ.

ಇಂದು ನಡೆದ ಮೂರನೇ ಹಂತದ ಚುನಾವಣೆಯಲ್ಲಿ ಇಬ್ಬರು ಮಾಜಿ ಉಪಮುಖ್ಯಮಂತ್ರಿಗಳಾದ ತಾರಾ ಚಂದ್ ಮತ್ತು ಮುಜಾಫರ್ ಬೇಗ್ ಸೇರಿದಂತೆ 415 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

2019 ರ ಆಗಸ್ಟ್‌ನಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಮೊದಲ ಬಾರಿಗೆ ವಿಧಾನಸಭಾ ಚುನಾವಣೆ ನಡೆದಿದ್ದು, ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ)ಯ ವಿಶೇಷ ಮತಗಟ್ಟೆಗಳು ಸೇರಿದಂತೆ ಎಲ್ಲಾ ಮತಗಟ್ಟೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!