ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ರಾತ್ರಿ ಜಿಲ್ಲೆಯ ಬೇಹಿಬಾಗ್ ಪ್ರದೇಶದಲ್ಲಿ ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಡ್ಡರ್‌ನಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು.
ಆದರೆ, ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಶೋಧ ಕಾರ್ಯಾಚರಣೆ ಎನ್‌ಕೌಂಟರ್‌ಗೆ ತಿರುಗಿತು ಎನ್ನಲಾಗಿದೆ.