ಜಮ್ಮು ಕಾಶ್ಮೀರ ಇನ್‌ಸ್ಪೆಕ್ಟರ್ ನೇಮಕಾತಿ ಹಗರಣ: ದೇಶದಾದ್ಯಂತ 33 ಸ್ಥಳಗಳಲ್ಲಿ ಸಿಬಿಐ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಮತ್ತು ಕಾಶ್ಮೀರದ ಇನ್‌ಸ್ಪೆಕ್ಟರ್ (SI) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾದಳವು (ಸಿಬಿಐ) ದೇಶದಾದ್ಯಂತ 33 ಸ್ಥಳಗಳಲ್ಲಿ ದಾಳಿ ನಡೆಸಿದೆ. ಶೋಧ ಕಾರ್ಯವು ಜಮ್ಮು, ಶ್ರೀನಗರ, ಕರ್ನಾಲ್, ಮಹೇಂದರ್‌ಗಢ, ಹರಿಯಾಣದ ರೇವಾರಿ, ಗುಜರಾತ್‌ನ ಗಾಂಧಿನಗರ, ಉತ್ತರ ಪ್ರದೇಶದ ಗಾಜಿಯಾಬಾದ್, ಕರ್ನಾಟಕದ ಬೆಂಗಳೂರು ಮತ್ತು ದೆಹಲಿ ಪ್ರದೇಶಗಳಲ್ಲಿ ನಡೆಯುತ್ತಿದೆ.

ಇದಲ್ಲದೇ ಜಮ್ಮು ಕಾಶ್ಮೀರದ ಉನ್ನತ ಅಧಿಕಾರಿಗಳ ಮನೆಯ ಮೇಲೂ ದಾಳಿ ನಡೆಸಲಾಗಿದ್ದು JKSSB ಮಾಜಿ ಅಧ್ಯಕ್ಷ ಖಾಲಿದ್ ಜಹಾಂಗೀರ್, JKSSB ನ ಪರೀಕ್ಷಾ ನಿಯಂತ್ರಕ ಅಶೋಕ್ ಕುಮಾರ್ ಮತ್ತು DSP ಮತ್ತು CRPF ಸೇರಿದಂತೆ J&K ಪೊಲೀಸ್‌ನ ಕೆಲವು ಅಧಿಕಾರಿಗಳ ಆವರಣದಲ್ಲಿ ದಾಳಿ ನಡೆಸಲಾಗುತ್ತಿದೆ.

ಜಮ್ಮುವಿನ 14, ಶ್ರೀನಗರದ ಒಂದು, ಹರಿಯಾಣದ 13, ಗಾಂಧಿನಗರದ ಒಂದು ಮತ್ತು ಬೆಂಗಳೂರಿನಲ್ಲಿ ಒಂದು ಸೇರಿದಂತೆ 33 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸುತ್ತಿದೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!