ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.
ಪುಲ್ವಾಮಾದ ಅರಿಹಾಲ್ ಗ್ರಾಮದ ಬಳಿ ಗುರುವಾರ ರಾತ್ರಿ ಎನ್‌ಕೌಂಟರ್ ನಡೆದಿದೆ. ಈ ವೇಳೆ ಓರ್ವ ಉಗ್ರ ಬಲಿಯಾಗಿದ್ದು, ಆತನ ಗುರುತು ಇನ್ನೂ ಪತ್ತೆಯಾಗಿಲ್ಲ. ಸದ್ಯ ಆತನಿಂದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಗುಪ್ತಚರ ಮಾಹಿತಿ ಮೇರೆಗೆ ನ.30ರ ಮಧ್ಯರಾತ್ರಿ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.