Wednesday, October 5, 2022

Latest Posts

ಬ್ರೇಕ್‌ ವಿಫಲವಾಗಿ ನದಿಗೆ ಉರುಳಿದ ಬಸ್:‌ ಆರು ಯೋಧರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನ ಫ್ರಿಸ್ಲಾನ್‌ನಲ್ಲಿ ಭಾರತೀಯ ಯೋಧರು ಪ್ರಯಾಣಿಸುತ್ತಿದ್ದ ವಾಹನವೊಂದು ರಸ್ತೆ ಪಕ್ಕದಲ್ಲಿದ್ದ ನದಿಗೆ ಉರುಳಿಬಿದ್ದದೆ. ಘಟನೆಯಲ್ಲಿ ಆರು ಮಂದಿ ಯೋಧರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇನ್ನೂ ಹಲವರಿಗೆ ಗಾಯಗಳಾಗಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. ಅಮರನಾಥ ಯಾತ್ರೆಗಾಗಿ ಈ ಪ್ರದೇಶದಲ್ಲಿ ಯೋಧರನ್ನು ನಿಯೋಜಿಸಲಾಗಿತ್ತು ಎಂದು ತಿಳಿದುಬಂದಿದೆ.

39 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸಿವಿಲ್ ಬಸ್ ITBP (ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ 37 ಮತ್ತು ಜೆ & ಕೆ ಪೋಲಿಸ್ ನಿಂದ 2)ಇದ್ದರು ಎನ್ನಲಾಗಿದೆ.  ಬಸ್‌ನ ಬ್ರೇಕ್‌ ವಿಫಲವಾದ್ದರಿಂದ ರಸ್ತೆ ಬದಿಯ ನದಿಯ ತಳಕ್ಕೆ ಉರುಳಿದೆ. ಭದ್ರತಾ ಪಡೆ ಚಂದನ್ವಾರಿಯಿಂದ ಪಹಲ್ಗಾಮ್ ಕಡೆಗೆ ಪ್ರಯಾಣಿಸುತ್ತಿದ್ದುದಾಗಿ ತಿಳಿದಿದೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!