ಜನಸಂಕಲ್ಪಯಾತ್ರೆ: ಕಲ್ಯಾಣ ಕರ್ನಾಟಕಕ್ಕೆ ನಾವೇ ಹೆಚ್ಚು ಅನುದಾನ ನೀಡಿದ್ದು ಎಂದ ಶ್ರೀರಾಮುಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಯ ಗರಿಷ್ಠ ಶಾಸಕರನ್ನು ಗೆಲ್ಲಿಸಬೇಕು. ರಾಜ್ಯದಲ್ಲಿ 150 ಬಿಜೆಪಿ ಶಾಸಕರು ಗೆದ್ದು ಅಧಿಕಾರ ಪಡೆಯುವಂತಾಗಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸಬೇಕು ಎಂದು ಸಚಿವ ಬಿ.ಶ್ರೀರಾಮುಲು ಮನವಿ ಮಾಡಿದರು.
ಬೀದರ್ ಜಿಲ್ಲೆಯ ಔರಾದ್ ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಗೋವುಗಳ ಸಂರಕ್ಷಣೆಗಾಗಿ 30 ಜಿಲ್ಲೆಗಳಲ್ಲಿ ಗೋಶಾಲೆ ನಿರ್ಮಾಣದ ಕೆಲಸ ಮಾಡಿದ್ದಾರೆ. ಇದು ಅತ್ಯಂತ ಶ್ಲಾಘನಾರ್ಹ ಎಂದರು. ಗೋವುಗಳಿಗಾಗಿ ಮೊಬೈಲ್ ಕ್ಲಿನಿಕ್ ತೆರೆದಿದ್ದಾರೆ. ಇದು ಜನಮೆಚ್ಚುವ ಕಾರ್ಯ ಎಂದರು.
ವಿಜಯ ಸಂಕಲ್ಪಕ್ಕಾಗಿ ಬಿಜೆಪಿ ಯಾತ್ರೆಗಳನ್ನು ನಡೆಸುತ್ತಿದೆ. ಇವತ್ತು ಬೀದರ್ ಜಿಲ್ಲೆಯ ಬಸವಣ್ಣನ ಜನ್ಮಭೂಮಿ- ಕಲ್ಯಾಣ ಭೂಮಿಯಲ್ಲಿ ಯಾತ್ರೆ ಸಾಗುತ್ತಿದೆ. 1.20 ಲಕ್ಷ ಲಂಬಾಣಿ ಹಟ್ಟಿಗಳು, ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮವನ್ನಾಗಿ ಸಿಎಂ ಮತ್ತು ಕಂದಾಯ ಸಚಿವರು ಘೋಷಿಸಿದ್ದಾರೆ. ಇದು ಅಭಿವೃದ್ಧಿಗೆ ಪೂರಕ ಎಂದು ಹೇಳಿದರು.
ಕಲ್ಯಾಣ ಕರ್ನಾಟಕದಲ್ಲಿ 1600 ಹೊಸ ಬಸ್ ಖರೀದಿಸಿ ಓಡಾಟಕ್ಕೆ ಅವಕಾಶ ಮಾಡಲಾಗುತ್ತಿದೆ ಎಂದು ಅವರು ಪ್ರಕಟಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಎಸ್‍ಸಿ, ಎಸ್‍ಟಿ ಸಮುದಾಯದ ಅನುದಾನವನ್ನು ಹೆಚ್ಚಿಸಿ ನೆರವಾಗಿದ್ದಾರೆ ಎಂದು ಪ್ರಶಂಸಿಸಿದರು. ಬಿಜೆಪಿಯ ಕೇಂದ್ರ- ರಾಜ್ಯ ಸರಕಾರಗಳು ದೇಶದ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಕಾಂಗ್ರೆಸ್ ಸರಕಾರವು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕನಿಷ್ಠ ಅನುದಾನವನ್ನು ನೀಡಿದ್ದರೆ, ನಮ್ಮ ಸರಕಾರವು ಈ ಅನುದಾನವನ್ನು ದ್ವಿಗುಣಗೊಳಿಸಿದೆ ಎಂದು ಮೆಚ್ಚುಗೆ ಸೂಚಿಸಿದರು.

ರಾಜ್ಯದಲ್ಲಿ ಮತ್ತೆ ಬಿಜೆಪಿ ಗೆಲುವಿನ ನಗಾರಿ: ಬೈರತಿ ಬಸವರಾಜ್
ಕೇಂದ್ರದ ರಾಜ್ಯದ ಬಿಜೆಪಿ ಸರ್ಕಾರಗಳಿಂದ ದೇಶ ಮತ್ತು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಆಗಿದೆ. ಇದನ್ನು ಗಮನಿಸಿ ಜನತೆ ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲಿದ್ದಾರೆ ಎಂದು ಸಚಿವ ಬೈರತಿ ಬಸವರಾಜ್ ವಿಶ್ವಾಸ ವ್ಯಕ್ತಪಡಿಸಿದರು. ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ಇದು ಜನಸಂಕಲ್ಪ ಯಾತ್ರೆಯಂತಿಲ್ಲ, ಬಸವಣ್ಣನ ಪುಣ್ಯಭೂಮಿಯಿಂದ ಹೊರಟ ವಿಜಯ ಯಾತ್ರೆಯಂತಿದೆ ಎಂದು ಬಣ್ಣಿಸಿದರು. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಅನುಭವ ಮಂಟಪದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿದ್ದಾರೆ ಎಂದು ಶ್ಲಾಘಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ್ ಖೂಬಾ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚೌಹಾಣ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!