‘ಜನ ಗಣ ಮನ, ವಂದೇ ಮಾತರಂಗೆ ಸಮಾನ ಗೌರವ ನೀಡಬೇಕು’: ಕೇಂದ್ರ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ರಾಷ್ಟ್ರಗೀತೆ ‘ಜನ ಗಣ ಮನ’ ಮತ್ತು ‘ವಂದೇ ಮಾತರಂ’ ಎರಡಕ್ಕೂ ದೇಶದ ನಾಗರಿಕರು ಸಮಾನ ಗೌರವ ನೀಡಬೇಕು. ಇವೆರಡೂ ಒಂದೇ ಸಾಲಿನಲ್ಲಿ ನಿಲ್ಲುತ್ತದೆ ಎಂದು ದೆಹಲಿ ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ.

‘ವಂದೇ ಮಾತರಂ’ ಗೀತೆಗೆ ರಾಷ್ಟ್ರಗೀತೆಯಷ್ಟೇ ಗೌರವ ಮತ್ತು ಸಮಾನ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿ ನ್ಯಾಯವಾದಿ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯೆಯಾಗಿ ಗೃಹ ಸಚಿವಾಲಯವು ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ವಿಚಾರ ಹೇಳಿದೆ.

ಈ ಎರಡು ಹಾಡುಗಳೂ ಭಾರತೀಯರಲ್ಲಿ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ. ಹಾಡಿನ ನುಡಿಸುವಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ಎಲ್ಲಾ ನಿರ್ದೇಶನಗಳನ್ನು ಪಾಲನೆ ಮಾಡಲಾಗುತ್ತಿದೆ. ಎರಡೂ ಗೀತೆಗಳಿಗೂ ಅದರದೇ ಆದ ಪಾವಿತ್ರ್ಯವಿದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!