ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದಳಪತಿ ವಿಜಯ್ ನಟಿಸಿರುವ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.
ಈ ಬಾರಿಯೂ ಸಹ ‘ಜನ ನಾಯಗನ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ಬಲು ಅದ್ಧೂರಿಯಾಗಿ ಮಲೇಷಿಯಾನಲ್ಲಿ ಆಯೋಜಿಸಲಾಗಿತ್ತು. ದೂರದ ಮಲೇಷಿಯಾನಲ್ಲಿ ಕಾರ್ಯಕ್ರಮ ನಡೆದಿದ್ದರಿಂದ ಕಾರ್ಯಕ್ರಮವನ್ನು ಯೂಟ್ಯೂಬ್ನಲ್ಲಿ ಆದರೂ ನೋಡಲು ಅಭಿಮಾನಿಗಳು ಕಾತರರಾಗಿದ್ದರು, ಆದರೆ ಚಿತ್ರತಂಡ ಅಭಿಮಾನಿಗಳಿಗೆ ಶಾಕ್ ನೀಡಿದೆ.
‘ಜನ ನಾಯಗನ್’ ಸಿನಿಮಾ ಆಡಿಯೋ ಲಾಂಚ್ ಕಾರ್ಯಕ್ರಮ ಯೂಟ್ಯೂಬ್ನಲ್ಲಿ ಬಿಡುಗಡೆ ಆಗುತ್ತಿಲ್ಲ ಬದಲಿಗೆ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿದೆ.
ಈ ಹಿಂದೆಲ್ಲ ವಿಜಯ್ ಅವರ ಯಾವುದೇ ಸಿನಿಮಾದ ಆಡಿಯೋ ಲಾಂಚ್ ಅಥವಾ ಪ್ರೀ ರಿಲೀಸ್ ಕಾರ್ಯಕ್ರಮ ಯೂಟ್ಯೂಬ್ನಲ್ಲಿ ಲೈವ್ ಮಾಡಲಾಗುತ್ತಿತ್ತು, ಅಥವಾ ಕಾರ್ಯಕ್ರಮ ನಡೆದ ಒಂದೆರಡು ದಿನಗಳ ಬಳಿಕ ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಕಾರ್ಯಕ್ರಮವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ.
‘ಜನ ನಾಯಗನ್’ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಕೆವಿಎನ್ನವರು ‘ಜನ ನಾಯಗನ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದ ಪ್ರಸಾರ ಹಕ್ಕನ್ನು ಒಟಿಟಿಗೆ ಮಾರಾಟ ಮಾಡಿದ್ದಾರೆ. ಅದೂ ದೊಡ್ಡ ಮೊತ್ತಕ್ಕೆ ಈ ಡೀಲ್ ನಡೆದಿದೆ ಎನ್ನಲಾಗುತ್ತಿದೆ.
ಇದೀಗ ‘ಜನ ನಾಯಗನ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ಜೀ5 ಒಟಿಟಿಯಲ್ಲಿ ಸ್ಟ್ರೀಮ್ ಆಗಲಿದೆ. ಜನವರಿ 4 ರಂದು ಜೀ5ನಲ್ಲಿ ಅಭಿಮಾನಿಗಳು ‘ಜನ ನಾಯಗನ್’ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ವಿವರವಾಗಿ ನೋಡಬಹುದಾಗಿದೆ.

