ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲಯಾಳಂ ನಟ, ಕೇಂದ್ರ ಸಚಿವ ಸುರೇಶ್ ಗೋಪಿ,ಅನುಪಮಾ ಪರಮೇಶ್ವರನ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ ‘ಜಾನಕಿ vs ಸ್ಟೇಟ್ ಆಫ್ ಕೇರಳ’ ಸಿನಿಮಾ ಒಟಿಟಿಗೆ ಬರಲು ಸಜ್ಜಾಗಿದೆ.
‘ಜಾನಕಿ vs ಸ್ಟೇಟ್ ಆಫ್ ಕೇರಳ’ ಸಿನಿಮಾ ‘ಜೀ5’ (Zee5) ಮೂಲಕ ಪ್ರಸಾರ ಆಗಲಿದೆ. ಆಗಸ್ಟ್ 15ರಿಂದ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ.
ಪ್ರವೀಣ್ ನಾರಾಯಣನ್ ಅವರು ಕಥೆ ಬರೆದು ‘ಜಾನಕಿ vs ಸ್ಟೇಟ್ ಆಫ್ ಕೇರಳ’ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಜೆ. ಫಣೀಂದ್ರ ಕುಮಾರ್ ಅವರು ನಿರ್ಮಾಣ ಮಾಡಿದ್ದಾರೆ. ಸೇತುರಾಮನ್ ನಾಯರ್ ಕಂಕೋಲ್ ಅವರು ಸಹ-ನಿರ್ಮಾಪಕರಾಗಿದ್ದಾರೆ.
ಮಲಯಾಳಂ ಭಾಷೆಯ ಈ ಸಿನಿಮಾ ಈಗ ಕನ್ನಡ, ತಮಿಳು, ತೆಲುಗು, ಹಿಂದಿಗೆ ಡಬ್ ಆಗಿ ಒಟಿಟಿಯಲ್ಲಿ ಬಿಡುಗಡೆ ಆಗಲಿದೆ. ಆ ಮೂಲಕ ಹೆಚ್ಚಿನ ಪ್ರೇಕ್ಷಕರನ್ನು ತಲುಪಲಿದೆ.
ಕಾನೂನು ವ್ಯವಸ್ಥೆಯ ಬಗ್ಗೆ ಈ ಸಿನಿಮಾದಲ್ಲಿ ಕಥೆ ಇದೆ. ಕಥಾನಾಯಕಿ ಜಾನಕಿ ಬಾಳಲ್ಲಿ ಒಂದು ಘಟನೆ ನಡೆಯುತ್ತದೆ. ಈ ವೇಳೆ ಆಕೆ ನ್ಯಾಯಕ್ಕಾಗಿ ಹೋರಾಡುತ್ತಾಳೆ. ಮುಂದೇನಾಗುತ್ತದೆ ಎಂಬುದು ಸಸ್ಪೆನ್ಸ್. .