ಹೊಸದಿಗಂತ ವರದಿ ಯಲ್ಲಾಪುರ :
ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಮಿತಿ ಮೀರಿದ ಬೆಲೆ ಏರಿಕೆ ವಿರುದ್ದ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆಗೆ ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಗ್ರಾಮದೇವಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಜನರಿಗೆ ಹತ್ತಾರು ಆಮಿಷ ತೋರಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈಗ ಭ್ರಷರಟಾಚಾರದಲ್ಲಿ ಮುಳುಗಿದ್ದು, ಬೆಲೆ ಏರಿಕೆ ಹೊಡೆತಕ್ಕೆ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇಂತಹ ಜನವಿರೋಧಿ ಸರ್ಕಾರ ಕಿತ್ತೆಸೆಯುವ ತನಕ ಬಿಜೆಪಿ ವಿರಮಿಸದು ಎಂದು ಬಿ.ವೈ. ವಿಜಯೇಂದ್ರ ಗುಡುಗಿದ್ದಾರೆ.
ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ , ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ರವಿಕುಮಾರ್, ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ,ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ,ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ, ಇತರರು ಇದ್ದರು.