Friday, February 3, 2023

Latest Posts

ಬಿಜೆಪಿ ತೊರೆದ ‘ಗಣಿ ಧಣಿ’: ನೂತನ ‘ಕಲ್ಯಾಣ ಪ್ರಗತಿ ಪಕ್ಷ’ ಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

2023ಕ್ಕೆ ರಾಜ್ಯ ವಿಧಾನಸಭಾ ಚುನಾವಣಾ ಕಾವು ಈಗಾಗಲೇ ರಂಗೇರಿದ ಬೆನ್ನಲ್ಲೇ ಗಣಿ ಧಣಿ ಗಾಲಿ ಜನಾರ್ಧನ ರೆಡ್ಡಿ ಹೊದ ಪಕ್ಷ ಸ್ಥಾಪಿಸಿದ್ದಾರೆ. ಮತ್ತೊಮ್ಮೆ ಅಧಿಕಾರ ಪಡೆಯಲು ಬಿಜೆಪಿ ತಂತ್ರ ರೂಪಿಸುತ್ತಿದ್ದರೆ, ಬಿಜೆಪಿಯನ್ನು ಮಣಿಸಿ ಗದ್ದುಗೆ ಏರಲು ಕಾಂಗ್ರೆಸ್‌, ಜೆಡಿಎಸ್‌, ಎಎಪಿ ಪ್ರತಿತಂತ್ರ ರೂಪಿಸುತ್ತಿವೆ. ಇದರ ಬೆನ್ನಲ್ಲೇ ಕಲ್ಯಾಣ ಪ್ರಗತಿ ಪಕ್ಷ ಘೋಷಣೆ ಮಾಡಿ ರಾಜ್ಯ ರಾಜಕಾರಣಕ್ಕೆ ಜನಾರ್ದನ ರೆಡ್ಡಿ ರೀ ಎಂಟ್ರಿ ಕೊಟ್ಟಿದ್ದಾರೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದಕ್ಕಾಗಿ ಬಿಜೆಪಿಯಲ್ಲಿ ಮೂಲೆ ಗುಂಪಾಗಿದ್ದ ಜನಾರ್ದನ ರೆಡ್ಡಿ ತನ್ನದೇ ಪಕ್ಷ ಸ್ಥಾಪಿಸುವುದಾಘಿ ಈ ಹಿಂದೆ ಘೋಷಣೆ ಮಾಡಿದ್ದರು. ಅದರಂತೆಯೇ ಇಂದು ʻಕಲ್ಯಾಣ ಪ್ರಗತಿ ಪಕ್ಷʼ ಸ್ಥಾಪಿಸಿದ್ದು, ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಹೊಸ ಮನೆಯನ್ನು ಸಹ ನಿರ್ಮಾಣ ಮಾಡಿದ್ದಾರೆ.

ಪಕ್ಷ ಘೋಷಣೆ ಮಾಡಿದ ಬೆನ್ನಲ್ಲೇ ತಾವು ಕಣಕ್ಕಿಳಿಯುವ ಕ್ಷೇತ್ರದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಗದಗ ಕ್ಷೇತ್ರದಿಂದ ಈ ಬಾರಿ ವಿಧಾನಸಭಾ ಚುನಾವಣೆಗೆ ಅಖಾಡಕ್ಕಿಳಿಯುವುದಾಗಿ ರೆಡ್ಡಿ ತಿಳಿಸಿದರು. ತಮ್ಮ ಪತ್ನಿ ಅರುಣಾ ಲಕ್ಷ್ಮಿ ಗಂಗಾವತಿಯಿಂದ ಕಣಕ್ಕಿಳಿಯಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!