ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ , ಮಾಜಿ ಸಚಿವ ಶ್ರೀರಾಮುಲು ಮುನಿಸು ಮರೆತು ಮತ್ತೆ ಒಂದಾಗಿದ್ದಾರೆ.
ಒಂದು ಕಾಲದಲ್ಲಿ ಬಳ್ಳಾರಿ ಜಿಲ್ಲೆಯ ರಾಜಕಾರಣದಿಂದ ಹಿಡಿದು ರಾಜ್ಯ, ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದ ರೆಡ್ಡಿ-ರಾಮುಲು ಜೋಡಿ ಇತ್ತೀಚೆಗಷ್ಟೇ ದೂರವಾಗಿದ್ದರು.
ಆದರೆ, ದಿಢೀರ್ ಈಗ ಮನಸು ಬದಲಾಯಿಸಿದ್ದಾರೆ. ನಮ್ಮ ನಡುವೆ ಯಾವುದೇ ಜಗಳಗಳಿಲ್ಲ. ನಾವು ಚೆನ್ನಾಗಿದ್ದೇವೆ ಎಂದು ಒತ್ತಿ ಹೇಳುತ್ತಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬಳ್ಳಾರಿ ವಿಭಾಗದ ಸಂಘಟನಾ ಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಅಕ್ಕ-ಪಕ್ಕ ಕುಳಿತು ಕುಶಲೋಪರಿ ವಿಚಾರಿಸಿದರು.ಭಾಷಣದಲ್ಲೂ ನಾವಿಬ್ಬರೂ ಒಂದಾಗಿದ್ದೇವೆ. ಯಾರು ಎಷ್ಟೇ ಹುಳಿ ಹಿಂಡಿದರೂ ಕಿವಿಗೊಡುವುದಿಲ್ಲ. ಹಿಂದೆಯೂ, ಮುಂದೆಯೂ ಜೀವದ ಗೆಳೆಯರಾಗಿದ್ದೇವೆ ಎಂದು ಒಗ್ಗಟ್ಟಿನ ಸಂದೇಶ ರವಾನಿಸಿದರು.