ಇಂದು ರಾಜ್ಯಾದ್ಯಂತ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ‘ಜನತಾ ದರ್ಶನ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ರಾಜ್ಯದೆಲ್ಲೆಡೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಜನತಾ ದರ್ಶನ ನಡೆಯಲಿದ್ದು, ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಿದ್ದಾರೆ.

ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಜನತಾ ದರ್ಶನ ಹಮ್ಮಿಕೊಳ್ಳಲಾಗಿದ್ದು, ಆಯಾಯ ಜಿಲ್ಲೆಯ ಉಸ್ತುವಾರಿ ಸಚಿವರು ಎಲ್ಲರ ಸಮ್ಮುಖದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಲಿದ್ದಾರೆ ಹಾಗೂ ಸಾಧ್ಯವಾದರೆ ಸ್ಥಳದಲ್ಲಿಯೇ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ.

ಆಡಳಿತಕ್ಕೆ ವೇಗ ನೀಡಲು, ಜನರ ಹತ್ತಿರಕ್ಕೆ ತಲುಪಲು, ಸರ್ಕಾರಿ ಕೆಲಸ ಶೀಘ್ರಗೊಳಿಸಲು ಈ ಪ್ರಯತ್ನ ಮಾಡಲಾಗಿದೆ. ಜಾತಿ ಪ್ರಮಾಣಪತ್ರ, ಖಾತೆ ಬದಲಾವಣೆ, ನೀರು, ಟ್ರಾನ್ಸ್‌ಫಾರ್ಮರ್, ವಿದ್ಯುತ್ ಕಂಬ ಅಳವಡಿಕೆ ಹೀಗೆ ಯಾವ ರೀತಿಯ ಸಮಸ್ಯೆಗಳಿದ್ದರೂ ಸ್ಥಳದಲ್ಲಿಯೇ ಅಹವಾಲು ಸ್ವೀಕರಿಸಿ ಪರಿಹಾರ ನೀಡಲಾಗುತ್ತದೆ.

ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿರಲಿದ್ದಾರೆ. ಜನತಾ ದರ್ಶನದಲ್ಲಿ ಸಲ್ಲಿಕೆಯಾಗುವ ದೂರುಗಳು ಸಾರ್ವಜನಿಕಾ ಕುಂದುಕೊರತೆ ನಿವಾರಣೆ ವ್ಯವಸ್ಥೆ ತಂತ್ರಾಂಶದಲ್ಲಿ ದಾಖಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!