‘ಜನತಾದರ್ಶನ’ ಕಾರ್ಯಕ್ರಮ: ಮಂಡ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಆಗಮನ

ಹೊಸದಿಗಂತ ಮಂಡ್ಯ :

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ನಡೆಯುವ ಜನತಾದರ್ಶನ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಮಂಡ್ಯದ ಶಕ್ತಿ ದೇವತೆ ಶ್ರೀ ಕಾಳಿಕಾಂಬ ದೇವಾಲಯಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿದರು.
ಕುಮಾರಸ್ವಾಮಿ ಗೆಲುವು ಸಾಧಿಸಿದರೆ ವಿಶೇಷ ಪೂಜೆ ಸಲ್ಲಿಸುವುದಾಗಿ ದೇವಾಲಯದ ಮುಂದೆ ಇರುವ ಬನ್ನಿ ಮರಕ್ಕೆ ಬಿಜೆಪಿ ಮುಖಂಡ ಶಿವಕುಮಾರ್ ಆರಾಧ್ಯ ಅವರು ಹರಕೆ ಕಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಹರಕೆ ಕಟ್ಟು ಬಿಚ್ಚಿ ದೇವರಿಗೆ ಅರ್ಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!