ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿನ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ. ಸರ್ಕಾರಿ ಆಸ್ಪತ್ರೆಗಳ ಆವರಣಗಳಲ್ಲಿ ಇರುವ ಜನಷೌಧಿ ಕೇಂದ್ರಗಳನ್ನು ಮಾತ್ರ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರಿಗೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಔಷಧಿಗಳು ದೊರೆಯುವಂತೆ ಮಾಡುವ ನಿಮ್ಮ ಕಾಳಜಿಯನ್ನು ನಾನು ಶ್ಲಾಘಿಸುತ್ತೇನೆ. ಕರ್ನಾಟಕ ಸರ್ಕಾರವು ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಅಗತ್ಯ ಔಷಧಿಗಳ ಪಟ್ಟಿಯ ಪ್ರಕಾರ ಎಲ್ಲಾ ಅಗತ್ಯ ಔಷಧಿಗಳನ್ನು ಉಚಿತವಾಗಿ ಪೂರೈಸುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಸುವ್ಯವಸ್ಥಿತಗೊಳಿಸಲು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತವಾಗಿ ಸಿಗುವ ಔಷಧಿಗಳನ್ನು ನಿರಾಕರಿಸುವ ಯಾವುದೇ ಸಾಧ್ಯತೆಯನ್ನು ತಪ್ಪಿಸಲು, ಸರ್ಕಾರಿ ವೈದ್ಯರು ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಸುವ ಔಷಧಿಗಳಿಗೆ ಮಾತ್ರ ಪ್ರಿಸ್ಕ್ರಿಪ್ಷನ್‌ಗಳನ್ನು ಸೀಮಿತಗೊಳಿಸುವಂತೆ ರಾಜ್ಯ ಸರ್ಕಾರ ರಾಜ್ಯ ಸರ್ಕಾರವು ನಿರ್ದೇಶಿಸಿದೆ ಎಂದು ತಿಳಿಸಿದ್ದಾರೆ.