ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಈಗ ಜನಿವಾರ ವಿವಾದ ಜೋರಾಗಿದ್ದು, ಸರ್ಕಾರದ ನಿಲುವುಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಆಟವಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮಾಡಿ ಕೂಡಲೇ ವರದಿ ನೀಡುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಸಚಿವ ಈಶ್ವರ ಖಂಡ್ರೆ ಅವರು ಜಿಲ್ಲಾಧಿಕಾರಿ ಡಿಸಿ ಶಿಲ್ಪಾ ಶರ್ಮಾ ಅವರಿಗೆ ಸೂಚನೆ ನೀಡಿದ್ದಾರೆ.
ಸಿಬ್ಬಂದಿಗಳು ಮಾಡಿದ ಎಡವಟ್ಟಿನಿಂದ ಇಂದು ವಿದ್ಯಾರ್ಥಿಯ ಭವಿಷ್ಯ ನಾಶವಾಗಿದೆ. ಹೀಗಾಗಿ ಉಪ ವಿಭಾಗಾಧಿಕಾರಿ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಿ ನಿಯಮಾನುಸಾರ ತಪ್ಪು ಮಾಡಿದವರ ಮೇಲೆ ಶಿಸ್ತು ಕ್ರಮವಹಿಸಿ. 24 ಗಂಟೆಯ ಒಳಗಾಗಿ ವರದಿಯನ್ನು ಸಲ್ಲಿಸಬೇಕು ಎಂದು ಪತ್ರದ ಮೂಲಕ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.