ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜನಶಕ್ತಿ ಜನತಾ ದಳದ ಮುಖ್ಯಸ್ಥ ತೇಜ್ ಪ್ರತಾಪ್ ಯಾದವ್ ಅವರಿಗೆ ಜೀವ ಬೆದರಿಕೆ ಬಂದ ಕಾರಣ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಪಾಟ್ನಾದಲ್ಲಿ ಮಾತನಾಡಿದ ಅವರು, ತಮ್ಮನ್ನು ಕೊಲ್ಲಲು ಪ್ರಯತ್ನಿಸುತ್ತಿರುವ ಅನೇಕ ಶತ್ರುಗಳಿದ್ದಾರೆ. ನನ್ನ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಯಾದವ್ ತಿಳಿಸಿದ್ದಾರೆ.
ತೇಜ್ ಪ್ರತಾಪ್ ಅವರು ತಮ್ಮ ಸಹೋದರ ತೇಜಸ್ವಿ ಯಾದವ್ ಅವರ 36ನೇ ಹುಟ್ಟುಹಬ್ಬದಂದು ಅವರಿಗೆ ಶುಭ ಕೋರಿದರು ಮತ್ತು ಅವರಿಗೆ ಉತ್ತಮ ಆರೋಗ್ಯ ಮತ್ತು ಉಜ್ವಲ ಭವಿಷ್ಯ ನೀಡಲು ಎಂದು ಹಾರೈಸಿದರು.
ಇಂದು ತೇಜಸ್ವಿಯವರ ಹುಟ್ಟುಹಬ್ಬ ಮತ್ತು ನಾನು ಅವರಿಗೆ ನನ್ನ ಶುಭಾಶಯಗಳನ್ನು ಕೋರುತ್ತೇನೆ. ಅವರಿಗೆ ಉಜ್ವಲ ಭವಿಷ್ಯ ನೀಡಲಿ ಎಂದು ಆಶಿಸುತ್ತೇನೆ. ಅವರಿಗೆ ನನ್ನ ಆಶೀರ್ವಾದವಿದೆ ಎಂದು ಅವರು ಹೇಳಿದರು.
ನವೆಂಬರ್ 6 ರಂದು ಮೊದಲ ಹಂತದಲ್ಲಿ ಮತದಾನ ನಡೆದ ಮಹುವಾ ಕ್ಷೇತ್ರದಲ್ಲಿ ತೇಜ್ ಪ್ರತಾಪ್ ಯಾದವ್ ಚುನಾವಣೆಗೆ ಸ್ಪರ್ಧಿಸಿದ್ದಾರೆ.

