Wednesday, August 10, 2022

Latest Posts

ಜನವಸತಿ ಪ್ರದೇಶದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ: ತೆರವಿಗೆ ಗ್ರಾಮಸ್ಥರ ಒತ್ತಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಚಿಕ್ಕಮಗಳೂರು:

ತಾಲ್ಲೂಕಿನ ಆವತಿ ಹೋಬಳಿ ಬ್ಯಾರವಳ್ಳಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಮಾಡಲಾಗುತ್ತಿದ್ದು ಇದನ್ನು ಕೂಡಲೇ ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರಿಗೆ ಸೋಮವಾರ ಭೇಟಿ ಮಾಡಿದ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಬ್ಯಾರವಳ್ಳಿ ಗ್ರಾಮದ ಸರ್ವೆ ನಂ.561 ರಲ್ಲಿ 3.20 ಎಕರೆ ಜಮೀನಿದೆ. ಅದರಲ್ಲಿ 3 ಎಕರೆ ಗೋಮಾಳ ಜಮೀನಿಗೆ ಮೀಸಲಿದೆ. ಉಳಿದ 0.20 ಗುಂಟೆ ಜಾಗದಲ್ಲಿ ಗ್ರಾಮಸ್ಥರ ಗಮನಕ್ಕೂ ತರದೇ ಜನವಸತಿ ಪ್ರದೇಶದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಮಾಡಲಾಗುತ್ತಿದೆ ಎಂದರು.
ಸುತ್ತಮುತ್ತಲಿನಲ್ಲಿ ಪ್ರದೇಶದಲ್ಲಿ ಜನವಸತಿ, ಅಂಗನವಾಡಿ, ಸಮುದಾಯಭವನ, ಸ್ಮಶಾನಗಳು ಇವೆ. ಆದ್ದರಿಂದ ಘನತ್ಯಾಜ್ಯ ಘಟನೆ ಸ್ಥಾಪಿಸಿದರೆ ಸುತ್ತಮುತ್ತಲು ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗಲಿದೆ ಎಂದು ಒತ್ತಾಯಿಸಿದ್ದಾರೆ. ಆದ್ದರಿಂದ ಈ ಘನ ತ್ಯಾಜ್ಯ ವಿಲೇವಾರಿಗೆ ಮೀಸಲಿಟ್ಟಿರುವಂತಹ ಜಾಗವನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಿ ಗ್ರಾಮಸ್ಥರಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಹೋಬಳಿ ಅಧ್ಯಕ್ಷ ಪ್ರಶಾಂತ್, ತಾ.ಪಂ. ಮಾಜಿ ಸದಸ್ಯ ಶಶಿಧರ್, ನಾಗರಾಜ್, ಆಲ್ದೂರಿನ ಪ್ರಥಮ್, ಗ್ರಾಮಸ್ಥರಾದ ಸುರೇಶ್, ರಮೇಶ್, ಮಲ್ಲೇಶ್, ಅಣ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss