ಜಪಾನ್‌ನಲ್ಲಿ ಬಂದೂಕು, ಚಾಕುಗಳಿಂದ ದಾಳಿ: ನಾಲ್ವರು ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಪಾನ್‌ನಲ್ಲಿ ಹಿಂಸಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಚಾಕು, ಗುಂಡಿನ ದಾಳಿಗೆ ನಾಲ್ವರು ಬಲಿಯಾಗಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಕಾನೊ ನಗರದ ಸಮೀಪವಿರುವ ಕೃಷಿ ಆಸ್ತಿಯ ಹೊರಗೆ ವ್ಯಕ್ತಿಯನ್ನು ಬಂಧಿಸಲಾಯಿತು.

ಗುರುವಾರ ರಾತ್ರಿಯಿಂದ 4 ಸಾವುಗಳನ್ನು ಪೊಲೀಸರು ಖಚಿತಪಡಿಸಿದ್ದಾರೆ. ಈ ಪೈಕಿ ಓರ್ವ ವೃದ್ಧ ಮಹಿಳೆ ಗಾಯಗೊಂಡಿರುವುದು ಪತ್ತೆಯಾಗಿದೆ. ಆರೋಪಿಯನ್ನು ಮುಂಜಾನೆ 4.30ಕ್ಕೆ ಬಂಧಿಸಲಾಯಿತು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಮೊದಲು ಇಬ್ಬರಿಗೆ ಚಾಕುವಿನಿಂದ ಇರಿದ ಆತ ನಂತರ ಇಬ್ಬರು ಪೊಲೀಸರನ್ನು ಗುಂಡಿಕ್ಕಿ ಕೊಂದಿದ್ದಾನೆ.

ಹತ್ಯೆಯಾದ ಪೊಲೀಸ್ ಅಧಿಕಾರಿಗಳನ್ನು ಯೋಶಿಕಿ ತಮೈ (46) ಮತ್ತು ಟಕುವೊ ಇಕೆಚಿ (61) ಎಂದು ಗುರುತಿಸಲಾಗಿದೆ. ಆರೋಪಿ ತಲೆಮರೆಸಿಕೊಂಡಿರುವ ಮನೆಯಲ್ಲಿ ಇಬ್ಬರು ಮಹಿಳೆಯರೂ ಇದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!