ಫಲಿಸದ ಚಿಕಿತ್ಸೆ ಶಿಂಜೋ ಅಬೆ ವಿಧಿವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶಿಂಜೋ ಅಬೆ ಮೃತಪಟ್ಟಿರುವುದಾಗಿ ಜಪಾನ್ ಮಾಧ್ಯಮಗಳು ಪ್ರಕಟಿಸಿವೆ. ಶುಕ್ರವಾರ ಬೆಳಗ್ಗೆ ಪಶ್ಚಿಮ ಜಪಾನ್‌ನ ನಾರಾದಲ್ಲಿ ಶಿಂಜೋ ಅಬೆ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದ.

ಶುಕ್ರವಾರ ಪ್ರಚಾರ ಭಾಷಣದಲ್ಲಿ ತೊಡಗಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಮೇಲೆ ದುಷ್ಕರ್ಮಿಯೊಬ್ಬ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಗುಂಡು ಶಿಂಜೋ ಅಬೆಯ ಎದೆಗೆ ತಾಗಿ ಸ್ಥಳದಲ್ಲೇ ಕುಸಿದು ಬಿದ್ದರು. ಕೂಡಲೇ ಪೊಲೀಸರು ದುಷ್ಕರ್ಮಿಯನ್ನು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!